ಉಡುಪಿ: ಕಾರು ಡಿವೈಡರ್ ಎರಿ ಲೈಟ್ ಕಂಬಕ್ಕೆ ಢಿಕ್ಕಿ ಚಾಲಕ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಂಬದಕೋಣೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಕಾರವಾರದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಡಿವೈಡರ್ ಎರಿ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ.. 2024ರ ಜನವರಿಯಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ!
ಕಾರು ಚಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಪ್ರದ್ಯೋತ್ ಮ್ರತ ದುರ್ದೈವಿ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ಪರಿಶೀಲನೆ ನಡೆಸಿ ಈ ಘಟನೆ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.