ಬೆಂಗಳೂರು: ಹೊಸ ವರ್ಷ ಆಚರಣೆಗೆ ಸಜ್ಜಾಗಿರುವ ನಗರದ ಮುಖ್ಯ ಪ್ರದೇಶಗಳಾದ ಎಂ ಜಿ ರಸ್ತೆ , ಬ್ರಿಗೇಡ್ ರಸ್ತೆ ಹಾಗೂ ಕೋರಮಂಗಲ 60 ಅಡಿ ರಸ್ತೆಯು ಎರಡೂ ಬದಿಗಳಲ್ಲಿರುವ ಬೆಸ್ಕಾಂ ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್ ಫಾರ್ಮರ್ ಗಳ ಕಾರ್ಯದಕ್ಷತೆಯನ್ನು ಬೆಸ್ಕಾಂ ಹಿರಿಯ ಅಧಿಕಾರಿಗಳು ಪರಿಶೀಲಿಶಿದರು. ಜೋತು ಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿ ಪಡಿಸಲಾಯಿತು.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ.. 2024ರ ಜನವರಿಯಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ!
ಈ ಮೂರು ಸ್ಥಳಗಳಲ್ಲಿರುವ ಟ್ರಾನ್ಸ್ ಫಾರ್ಮರ್ ಗಳ ನಿರ್ವಹಣೆಯನ್ನು ಇನ್ನೊಮ್ಮೆ ಮಾಡಲಾಯಿತು. ಹಾಗೆಯೇ ಹೊಸ ವರ್ಷ ಆಚರಣೆ ನಡೆಯುವ ಪ್ರದೇಶಗಳಲ್ಲಿ ಯಾವುದೇ ವಿದ್ಯುತ್ ಸಂಬಂದಿತ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಕಾವಲಿಗೆ ಬೆಸ್ಕಾಂ ಸಿಬ್ಬಂದಿಯನ್ನು ಭಾನುವಾರ ನಿಯೋಜಿಸಲಾಗುವುದು.