ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಸಿನಿಮಾದ ಅಬ್ಬರ ಎರಡನೇ ವಾರಕ್ಕೂ ಮುಂದುವರೆದಿದೆ. ಎರಡನೇ ದಿನದ ಕಲೆಕ್ಷನ್ 17.35 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಮೊದಲ ದಿನ ಮತ್ತು ಎರಡನೇ ದಿನ ಸೇರಿ ಒಟ್ಟು ಎರಡು ದಿನಕ್ಕೆ 37.14 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ.
ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ.. 2024ರ ಜನವರಿಯಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ!
ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ಮೊನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್ ಕಟೌಟ್ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್ ಡಿಬಾಸ್ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.
ಮೊದಲ ದಿನ ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.