ಗುಲಾಬಿ ಬಣ್ಣದ ಪೇರಳೆ ಹಣ್ಣಿನಲ್ಲಿ ವಿಟಮಿನ್ ಸಿ, ಎ, ಫೈಬರ್, ಪೊಟ್ಯಾಶಿಯಂ, ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದೆ. ಇದು ಮಧುಮೇಹನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಗ್ಲುಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ.
ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವ ಕಾರಣ ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ನಿಮ್ಮ ರೋಗಗಳಿಂದ ಕಾಪಾಡುತ್ತದೆ.
ಇದರಲ್ಲಿ ಫೈಬರ್ ಮತ್ತು ಪೊಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ. ಇದರಿಂದ ಹೃದಯ ಆರೋಗ್ಯವಾಗಿರುತ್ತದೆ.
ಇದರಲ್ಲಿ ಆಯಂಟಿ ಆಕ್ಸಿಡೆಂಟ್ ಗಳಿದ್ದು, ಇದು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ.
ಇದರಲ್ಲಿ ವಿಟಮಿನ್ ಸಿ ಇರುವ ಕಾರಣ ಇದು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಮತ್ತು ಇದರಲ್ಲಿ ಫೈಬರ್ ಇರುವ ಕಾರಣ ಇದು ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.