ಬೆಂಗಳೂರು:– ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ 1 ಸಾವಿರ ಗಡಿ ಮುಟ್ಟಿದೆ.
ರಾಜ್ಯಾದ್ಯಂತ 3527 ಮಂದಿಗೆ ಕೋವಿಡ್ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 229 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು ಕೋವಿಡ್ ಪಾಸಿಟಿವಿಟಿ ದರ 6.49 ದಾಖಲಾಗಿದ್ದು, ಮರಣ ಪ್ರಮಾಣ ದರ ಶೂನ್ಯವಿದೆ.
ಒಟ್ಟು 1000 ಸಕ್ರಿಯ ಪ್ರಕರಣಗಳಲ್ಲಿ 943 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದಾರೆ. 57 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 22 ಮಂದಿ ಐಸಿಯುನಲ್ಲಿದ್ದಾರೆ.
ಇನ್ನೂ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ ಇಲ್ಲದಿದ್ದರೂ ಜಾಗೃತಿ ಮೂಡಿಸುವಂತೆ ಆರೋಗ್ಯ ಇಲಾಖೆ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇತ್ತೀಚೆಗೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದರು. ಆದರೆ, ಕೋವಿಡ್ ನಿಯಮಾವಳಿ ಅನುಷ್ಠಾನದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.