ಬೆಂಗಳೂರು:- ಕುಡಿದ ಮತ್ತಿನಲ್ಲಿ ಕಿರಿಕ್ ತೆಗೆದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಫ್ಲೈ ಓವರ್ ಬಳಿ ಜರುಗಿದೆ.
ಯುವಕ ಶರ್ಟ್ ಹರಿದು ಹಾಕಿ ಹಲ್ಲೆ ನಡೆಸಲಾಗಿದ್ದು, ರಸ್ತೆ ಬದಿಯಲ್ಲಿ ಅರೆಬೆತ್ತಲೆಯಾಗಿ ಯುವಕ ಬಿದ್ದಿದ್ದಾನೆ. ಹಲ್ಲೆಗೊಳಗಾಗಿದ್ದ ಯುವಕನು ಸಹ ಫುಲ್ ಕುಡಿದು ಟೈಟ್ ಆಗಿದ್ದ ಎನ್ನಲಾಗಿದೆ. ಇನ್ನೂ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಹಲ್ಲೆಗೊಳಗಾಗಿ ಬಿದ್ದಿದ್ದ ಯುವಕನನ್ನ ಆಂಬ್ಯುಲೇನ್ಸ್ ಮೂಲಕ ರವಾನೆ ಮಾಡಲಾಗಿದೆ.