ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆಯೇ ಮೊದಲ ದಿನವೇ ಡಬಲ್ ಮರ್ಡರ್ (Double murder) ನಡೆದಿದೆ.
ಹನುಮಂತ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀನಿವಾಸ ನಗರದಲ್ಲಿ ಭಾನುವಾರ ರಾತ್ರಿ ಯುವಕನ ಕೊಲೆಯಾಗಿದೆ. ಬನಶಂಕರಿ ಮೂಲದ ವಿಜಯ(21)ಹತ್ಯೆಯಾದ ಯುವಕ. ಆತನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ ದುಷ್ಕರ್ಮಿಗಳು ರಸ್ತೆ ಬದಿ ಎಸೆದು ಪರಾರಿಯಾಗಿದ್ದಾರೆ.
ಭಾನುವಾರ ರಾತ್ರಿ 1 ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ. ವಿಜಯ್ ಅವರನ್ನು ಸ್ನೇಹಿತರೇ ಹತ್ಯೆಯಾಗಿರುವ ಶಂಕೆ ಇದೆ. ಅವರೆಲ್ಲ ಸೇರಿ ವಿಜಯ್ನನ್ನು ಕೊಂದು ಶ್ರೀನಿವಾಸ್ ನಗರ ಬಸ್ ನಿಲ್ದಾಣದ ಮುಂದೆ ಬಿಸಾಕಿ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.