ಕೊಡಗು:- ನನ್ನ ತಮ್ಮನ ಬಂಧನ ವಿಚಾರದಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮಧು ಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣ ಮುಚ್ಚಲು, ಮಾಧ್ಯಮಗಳ ಗಮನ ಬೇರೆಡೆ ಸೆಳೆದು ವಿಷಯಾಂತರ ಮಾಡಲು ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಾ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯನವರಿಗೆ 2024 ಲೋಕಸಭೆ ಚುನಾವಣೆಯಲ್ಲಿ ಕೊಡಗು ಮೈಸೂರು ಕ್ಷೇತ್ರದಲ್ಲಿ ಅವರ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲ್ಲ ಅಂತ ಗೊತ್ತಿದೆ. ಪ್ರತಾಪ್ ಸಿಂಹನನ್ನು ರಾಜಕೀಯವಾಗಿ ಮುಗಿಸಬೇಕು, ಟೆಕೆಟ್ ತಪ್ಪಿಸಬೇಕು. ಇಲ್ಲದಿದ್ದರೆ ಪ್ರತಾಪ್ ಸಿಂಹ ವಿರುದ್ಧ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲ್ಲ. ಹಾಗಾಗಿ ನನ್ನನ್ನು ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.