ಬೆಂಗಳೂರು :– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.
ಹಾಸನದ ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠಾಧಿಪತಿ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಇಲಾಖೆ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಸೇರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.