ದಾವಣಗೆರೆ:- ಪ್ರತಾಪ್ ಸಿಂಹ ಅವರ ತಮ್ಮನ ಕೇಸ್ ರಾಜಕೀಯ ಪ್ರೇರಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ. ಸಂಸದ ಪ್ರತಾಪ್ ಸಿಂಹ ಅವರ ತಮ್ಮನ ಕೇಸ್ ರಾಜಕೀಯ ಪ್ರೇರಿತವಾಗಿದೆ. ಅದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಕುಟುಕಿದ್ದಾರೆ.
ಮೈಸೂರಿನಲ್ಲಿ ಚುನಾವಣಾ ರಾಜಕಾರಣ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹತಾಶ ಮನೋಭಾವದಲ್ಲಿದೆ. ಹೀಗಾಗಿ, ಕಾಂಗ್ರೆಸ್ಸಿಗರು ಈ ರೀತಿ ಮಾಡ್ತಾ ಇದ್ದಾರೆ. ಲೋಕಸಭಾ ಚುನಾವಣೆಗೆ ಪ್ರತಾಪ್ ಸಿಂಹ ಹೆಸರು ಕೆಡಿಸಲು ಈ ರೀತಿ ಮಾಡ್ತಾ ಇದ್ದಾರೆ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ.