ಬೆಂಗಳೂರು:- ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾಳೆ ಬೆಂಗಳೂರು ಜನರ ಅಹವಾಲು ಸ್ವೀಕರಿಸಲಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನವರಿ 3ರಿಂದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಹೆಸರಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನೀರುಗಾಲುವೆ-ಕೆರೆ ಒತ್ತುವರಿ ತೆರವು ಮಾಡಿದ್ದರ ಲೆಕ್ಕ ಕೊಟ್ಟ ಬಿಬಿಎಂಪಿ ಜನರು ಸರ್ಕಾರಿ ಕಛೇರಿಗಳಿಗೆ ಬರುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ವಲಯವಾರು 2 ಅಥವಾ 3 ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಈ ಕಾರ್ಯಕ್ರಮ ನಡೆಸಲಾಗುತ್ತದೆ.
ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಆಸನ, ಕುಡಿಯುವ ನೀರು, ತಾತ್ಕಾಲಕ ಶೌಚಾಲಯಗಳ ವ್ಯವಸ್ಥೆ ಹಾಗೂ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿರುತ್ತದೆ. ಅಲ್ಲದೆ ವಿದ್ಯುತ್, ಜನರೇಟರ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.