ಮಂಡ್ಯ:- ಕೋಳಿಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ತೂಕದಲ್ಲಿ ಮೋಸ ಮಾಡಿದವನಿಗೆ ರೈತ ಮರಕ್ಕೆ ಕಟ್ಟಿ ಹಾಕಿ ಶಿಕ್ಷೆ ವಿಧಿಸಿರುವ ಘಟನೆ ಜರುಗಿದೆ.
ಪಾಂಡವಪುರ ತಾಲೂಕಿನ ಚಿಕ್ಕ ಬ್ಯಾಡಹಳ್ಳಿ ಗ್ರಾಮದಲ್ಲಿ ಘಟನೆ ಜರುಗಿದೆ. ಬ್ಯಾಡರಹಳ್ಳಿ ಗ್ರಾಮದ ರೈತ ಹನುಮಂತೇಗೌಡ ಕೋಳಿಫಾರಂ ನಡೆದಿರೋ ವಂಚನೆ..
ಈ ರೈತ ತಮ್ಮ ಕೋಳಿ ಫಾರಂ ನಲ್ಲಿ ಸಾಕಿ ಕೋಳಿಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡುತ್ತಿದ್ರು… ಮೈಸೂರು ಮೂಲದ NR ಚಿಕನ್ ಕಂಪನಿಯವರು ಈ ರೈತನ ಬಳಿ ಕೋಳಿಯನ್ನು ಕೊಂಡು ಕೊಳ್ಳುತ್ತಿದ್ರು..ಕಳೆದ ಮೂರ್ನಾಲ್ಕು ತಿಂಗಳಿಂದ ಈ ರೈತನಿಗೆ ಕೋಳಿ ತುಂಬುವಾಗ ವಂಚಕರು ತೂಕದಲ್ಲಿ ಮೋಸ ಮಾಡ್ತಿದ್ದರು.
ಇಂದು ಅನುಮಾನಗೊಂಡ ರೈತ ಕೋಳಿ ತುಂಬುವಾಗ ರೈತ ಬೇರೆ ತೂಕದ ಯಂತ್ರ ತರಿಸಿ ತೂಕ ಹಾಕಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ಈ ವೇಳೆ ಒಂದು ತೂಕದಲ್ಲಿ ರೈತನಿಗೆ ಸುಮಾರು 30 KG ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಇದರಿಂದ ರೊಚ್ಚಿಗೆದ್ದ ರೈತ ಹನುಮಂತೇಗೌಡ ಕೋಳಿ ತುಂಬಲು ಬಂದಿದ್ದ ನಾಲ್ವರಲ್ಲಿ ಇಬ್ಬರನ್ನು ಹಿಡಿದು ಮರಕ್ಕೆ ಕಟ್ಟಿ ಆಕ್ರೋಶ ಹೊರ ಹಾಕಿದ್ದಾರೆ.
ತೂಕದಲ್ಲಿ ಮೋಸ ಮಾಡಿ ಇದುವರೆಗೂ ವಂಚಿಸಿದ ಇವರ ವಿರುದ್ದ ಪೊಲೀಸರಿಗೆ ದೂರು ನೀಡಲೀಗಿದ್ದು ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.