ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ಗಳನ್ನು ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಭಾರತದ ಯುವ ಆರಂಭಿಕ ಶುಭಮನ್ ಗಿಲ್ಗೆ ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ ಮಹತ್ವದ ಸಲಹೆ ನೀಡಿದ್ದಾರೆ. ವೈಟ್ ಬಾಲ್ ಕ್ರಿಕೆಟ್ನಂತೆ ಟೆಸ್ಟ್ ಕ್ರಿಕೆಟ್ನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡಬಾರದು ಎಂದು ಹೇಳಿದ್ದಾರೆ.
ಸೆಂಚೂರಿಯನ್ನ ಸೂಪರ್ಸ್ಪೋರ್ಟ್ ಕ್ರೀಡಾಂಗಣದಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದರು. ಈ ಪಂದ್ಯದಲ್ಲಿ ಭಾರತ ತಂಡವು ಇನಿಂಗ್ಸ್ ಮತ್ತು 32 ರನ್ಗಳಿಂದ ಹೀನಾಯ ಸೋಲನ್ನು ಅನುಭವಿಸಿತು. ಈ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಕೇವಲ ಎರಡು ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದ ಗಿಲ್, ಎರಡನೇ ಇನಿಂಗ್ಸ್ನಲ್ಲಿ ಕೇವಲ 26 ರನ್ ಗಳಿಸಿ ಔಟ್ ಆಗಿದ್ದರು. ಇವರು ಕ್ರಮವಾಗಿ ವೇಗಿ ನಂಡ್ರೆ ಬರ್ಗರ್ ಮತ್ತು ಮಾರ್ಕೊ ಯೆನ್ಸೆನ್ಗೆ ವಿಕೆಟ್ ಒಪ್ಪಿಸಿದ್ದರು
ಸ್ಟಾರ್ ಸ್ಪೋರ್ಟ್ ಜೊತೆ ಮಾತನಾಡಿದ ಸುನೀಲ್ ಗವಾಸ್ಕರ್, ಬಿಳಿ ಚೆಂಡಿಗಿಂತ ಟೆಸ್ಟ್ ಕ್ರಿಕೆಟ್ನ ಅಗತ್ಯಗಳನ್ನು ನೆನೆಪಿಸಿಕೊಂಡು ಬ್ಯಾಟ್ ಮಾಡಬೇಕೆಂದು ಶುಭಮನ್ ಗಿಲ್ಗೆ ಸಕಹೆ ನೀಡಿದ್ದಾರೆ. ಟೆಸ್ಟ್ ಕ್ರಿಕೆಟ್, ಒಡಿಐ ಮತ್ತು ಟಿ20 ಕ್ರಿಕೆಟ್ಗಿಂತ ತುಂಬಾ ವಿಭಿನ್ನವಾಗಿದೆ. ಇದನ್ನು ಗಮನದಲ್ಲಿಕೊಂಡು ಆಡಬೇಕಾಗುತ್ತದೆ ಎಂದಿದ್ದಾರೆ.
ಶುಭಮನ್ ಗಿಲ್ ಸೀಮಿತ ಓವರ್ಗಳ ಸ್ವರೂಪದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಆದರೆ 2023 ರಲ್ಲಿ ಸಾಂಪ್ರದಾಯಿಕ ಮಾದರಿಯಲ್ಲಿ 10 ಇನಿಂಗ್ಸ್ಗಳಲ್ಲಿ 50 ಕ್ಕೂ ಹೆಚ್ಚು ಹೆಚ್ಚಿನ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಮಾರ್ಚ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಒಂದು ಶತಕವನ್ನು ಮಾತ್ರ ಗಳಿಸಿದ್ದರು. ಗಿಲ್ ಶೀಘ್ರದಲ್ಲೇ ತಮ್ಮ ಲಯವನ್ನು ಮರಳಿ ಪಡೆಯುತ್ತಾರೆ ಎಂದು ಗವಾಸ್ಕರ್ ಭರವಸೆ ವ್ಯಕ್ತಪಡಿಸಿದರು