ಬಳ್ಳಾರಿ:- ನ್ಯಾಯ ಬೆಲೆ ಅಂಗಡಿ ಮಾಲೀಕರಿಂದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ಜನವರಿ 16 ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಇಂದಿನ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ನ್ಯಾಯಬೆಲೆ ಅಂಗಡಿ ಮಾಲೀಕರು ಸಂಘದ ರಾಜ್ಯ ಕಾರ್ಯದರ್ಶಿಗಳಾದ ಮೀನಳ್ಳಿ ತಾಯಣ್ಣ ಅವರು ತಿಳಿಸಿದ್ದಾರೆ.
ನ್ಯಾಯಬೆಲೆ ಅಂಗಡಿಗಳ ಮಾಲೀಕರಿಂದ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ಮಾಡಲಾಗುವುದು. ಮುಖ್ಯವಾಗಿ ಕರ್ನಾಟಕದಲ್ಲಿ ಈಗಿರುವ ಡೀಲರ್ಗಳ ಕಮೀಷನ್ ಪ್ರತಿ ಕ್ವಿಂಟಲ್ 124 ರೂ.ಇದೆ.ಆದರೆ ಆದೇ ಪಕ್ಕದ ರಾಜ್ಯಗಳಾದ ಆಂಧ್ರ ಪದ್ರೇಶ, ಗೋವಾ,ಕೇರಳ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಡೀಲರ್ ಕಮೀಷನ್ ಸುಮಾರು 320 ರೂ.ಗಳಿಗಿಂತ ಹೆಚ್ಚಿದೆ.
ಆದರೆ ನಮ್ಮ ಕರ್ನಾಟಕದಲ್ಲಿ ಬಹಳ ಕಡಿಮೆ ಇದೆ, ಅಷ್ಟೇ ಅಲ್ಲದೇ ಈ ಕಮಿಷನ್ ಸಹ ಪ್ರತಿ ತಿಂಗಳು ಬರುತ್ತಿಲ್ಲ.ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಜೀವನ ನಡೆಸುವ ದುಸ್ಥಿತಿಯಲ್ಲಿ ಡೀಲರ್ಸ್ ಗಳ ಪರಿಸ್ಥಿತಿ ಇದೆ.ಹೀಗೆ ಇನ್ನು ಹತ್ತು ಹಲವು ಸಮಸ್ಯೆಗಳಿಂದ ಡೀಲರ್ಸ್ ಗಳು ಬಳಲುತ್ತಿದ್ದಾರೆ.ಈ ಎಲ್ಲಾ ವಿಷಯದ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮೀನಳ್ಳಿ ತಾಯಣ್ಣ ಅವರು ತಿಳಿಸಿದ್ದಾರೆ.