ಚಳ್ಳಕೆರೆ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಚಳ್ಳಕೆರೆ ನಗರದ ಹೊರಹೊಲಯದಲ್ಲಿ ಸಂಭವಿಸಿದೆ. ತಾಲೂಕಿನ ಸಿದ್ದಾಪುರ ಗ್ರಾಮದ ರಂಗಸ್ವಾಮಿ(40)ಸಾವಿಗೀಡಾದ ಮೃತ ದುರ್ದೈವಿ.
ಬಳ್ಳಾರಿ- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು ರಸ್ತೆಯ ಸೇತುವೆ ಬಳಿ . ರಂಗಸ್ವಾಮಿ ಚಳ್ಳಕೆರೆ ಯಿಂದ ಸಿದ್ದಾಪುರ ಗ್ರಾಮಕ್ಕೆ ಹೋಗುವ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಟಿವಿಎಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಸೇತುವೆ ಮೇಲಿಂದ ಬಿದ್ದು ಪಲ್ಟಿಯಾಗಿದ್ದು, ಲಾರಿ ಚಾಲಕ,ಹಾಗೂ ಕ್ಲಿನರ್ ಪ್ರಾಣಾಪಯಾದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಚಳ್ಳಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವರದಿ: ಪುರ್ಲೆಹಳ್ಳಿ ಹನುಮಂತರಾಜು