ಚಿಕ್ಕಮಗಳೂರು: ಶಾಲಾ ಬಸ್ ಡ್ರೈವರ್ (School Bus Driver) ಜೊತೆಗಿನ ಪ್ರೇಮದಾಟಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಬಂಕನಕಟ್ಟೆ ಬಳಿ ಶಾಲಾ ಬಸ್ ಡ್ರೈವರ್ 8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಚಲಿಸುತ್ತಿದ್ದ ರೈಲಿಗೆ (Train) ಸಿಲುಕಿ ತಾನೂ ಮಾಡಿಕೊಂಡಿದ್ದಾನೆ. ಡ್ರೈವರ್ ಸಂತೋಷ್ (38), ವಿದ್ಯಾರ್ಥಿನಿ ಜಾಹ್ನವಿ (14) ಸಾವಿಗೀಡಾದ ದುರ್ದೈವಿಗಳು.
ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ (Private School) ಜಾಹ್ನವಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಅದೇ ಶಾಲೆಯಲ್ಲಿ ಸಂತೋಷ್ ಕಳೆದ ಮೂರು ವರ್ಷಗಳಿಂದ ಬಸ್ ಡ್ರೈವರ್ ಆಗಿದ್ದ. ವಿದ್ಯಾರ್ಥಿನಿಯನ್ನ ಪ್ರೀತಿಸುವಂತೆ ಪೀಡಿಸುತ್ತಿದ್ದ. ಬಸ್ ಡ್ರೈವರ್ ಕಿರುಕುಳ ನೀಡುತ್ತಿದ್ದ ಬಗ್ಗೆ ವಿದ್ಯಾರ್ಥಿನಿ ಪೋಷಕರು ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.
Dry Black Grapes Benefit: ಕಪ್ಪು ಒಣ ದ್ರಾಕ್ಷಿಯನ್ನ ತಿನ್ನೋದ್ರಿಂದ ಸಿಗುವ ಲಾಭಗಳು!
ಭಾನುವಾರ ಸ್ನೇಹಿತರ ಜೊತೆ ನ್ಯೂಇಯರ್ ಪಾರ್ಟಿಗೆ ಹೋಗುವುದಾಗಿ ಜಾಹ್ನವಿ ಮನೆಯಿಂದ ಹೊರಟಿದ್ದಳು. ಆದ್ರೆ ಸಂತೋಷ್ ಆಕೆಯನ್ನ ತನ್ನೊಂದಿಗೆ ಕರೆದೊಯ್ದಿದ್ದ. ನಂತರ ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಇಬ್ಬರು ಸಾವಿಗೀಡಾಗಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ನಂತರ ದೂರು ನೀಡಿದರೂ ಕ್ರಮ ಕೈಗೊಳ್ಳದ ಶಾಲೆಯ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.