ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇಟಲಿ ಮತ್ತು ಮಾಲ್ಟಾದಲ್ಲಿ ನಡೆಯಲಿದೆ. ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕ ನಾಯರ್ ಹಾಗೂ ಶರಣ್ಯ ಶೆಟ್ಟಿ ಹಾಡುಗಳ ಚಿತ್ರೀಕರಣದಲ್ಲಿ ಪಾಲ್ಗೊಳಲಿದ್ದಾರೆ. ಹಾಡುಗಳ ಚಿತ್ರೀಕರಣಕ್ಕಾಗಿ ಮೂವತ್ತು ಜನರ ತಂಡ ಇಟಲಿಗೆ ಪ್ರಯಾಣ ಬೆಳಸಲಿದೆ. ಹೊಸವರ್ಷ ಆರಂಭದ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಎಲ್ಲರಿಗೂ ಚಿತ್ರತಂಡ ಹೊಸವರ್ಷದ ಶುಭಾಶಯ ತಿಳಿಸಿದೆ.
ಯಶಸ್ವಿ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ.
“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ