ನವದೆಹಲಿ: ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ಉದ್ಘಾಟನೆ ಕಾರ್ಯಕ್ರಮ ಸಮೀಪಿಸುತ್ತಿದ್ದಂತೆ ದೇವಾಲಯದ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡುವ ಆಘಾತಕಾರಿ ದಂಧೆ ಬೆಳಕಿಗೆ ಬಂದಿದೆ.
ಸೈಬರ್ ಕ್ರಿಮಿನಲ್ಗಳು ದೇವಸ್ಥಾನದ ಹೆಸರಿನಲ್ಲಿ ದೇಣಿಗೆ ಪಡೆಯಲು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಾಕಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (ವಿಹೆಚ್ಪಿ) ಎಚ್ಚರಿಸಿದೆ. QR ಕೋಡ್ ಅನ್ನು ಸ್ಕ್ಯಾನ್ ಮಾಡಿ, ರಾಮಮಂದಿರ ದೇವಾಲಯಕ್ಕಾಗಿ ದೇಣಿಗೆ ನೀಡುವಂತೆ ಸಂದೇಶ ಕಳುಹಿಸಲಾಗಿದೆ.
सावधान..!!
श्री राम जन्मभूमि तीर्थ क्षेत्र के नाम से फर्जी आईडी बना कर कुछ लोग पैसा ठगी का प्रयास कर रहे हैं। @HMOIndia @CPDelhi @dgpup @Uppolice को ऐसे लोगों के विरूद्ध विलम्ब कार्यवाही करनी चहिए। @ShriRamTeerth has not authorised any body to collect funds for this occasion. pic.twitter.com/YHhgTBXEKi— विनोद बंसल Vinod Bansal (@vinod_bansal) December 31, 2023
ವಿಹೆಚ್ಪಿ ವಕ್ತಾರ ವಿನೋದ್ ಬನ್ಸಾಲ್ ಮಾತನಾಡಿ, ಈ ವಿಷಯವನ್ನು ದೆಹಲಿ ಮತ್ತು ಉತ್ತರ ಪ್ರದೇಶದ ಗೃಹ ಸಚಿವಾಲಯ ಮತ್ತು ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಮಂದಿರದ ನಿರ್ಮಾಣದ ಉಸ್ತುವಾರಿ ವಹಿಸಿರುವ ಟ್ರಸ್ಟ್ ಹಣವನ್ನು ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ ಎಂದು ಒತ್ತಿ ಹೇಳಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸ್ ನಿಧಿ ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ. ನಾನು ಗೃಹ ಸಚಿವಾಲಯ, ಉತ್ತರ ಪ್ರದೇಶ ಡಿಜಿಪಿ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಜನರು ಇಂತಹ ವಂಚನೆಗಳಿಗೆ ಬಲಿಯಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.