ಬೆಂಗಳೂರು: ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದರು. “ಜಗನ್ನಾಥ ಭವನ”ದಲ್ಲಿ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ.
ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. ಇನ್ನೂ ಇದರ ವಿರುದ್ಧವಾಗಿ ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿ ಬುಧವಾರ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕರೆ ಕೊಟ್ಟಿದ್ದಾರೆ.
Post Office Recruitment: ಅಂಚೆ ಇಲಾಖೆಯಲ್ಲಿ ಸುವರ್ಣಾವಕಾಶ..! ಇಂದೇ ಅರ್ಜಿ ಸಲ್ಲಿಸಿ: ವೇತನ 20 ಸಾವಿರ!
ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.