ಹುಬ್ಬಳ್ಳಿ: ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ದಿನ ಹತ್ತಿರ ಬರುತ್ತಿರುವ ಸಮಯದಲ್ಲಿಯೇ ರಾಮಜನ್ಮಭೂಮಿ ಹೋರಾಟ ಪ್ರಕರಣ ರೀ ಓಪನ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. 1992 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ರಾಮ ಜನ್ಮಭೂಮಿ ಹೋರಾಟದ ಸಮಯದಲ್ಲಿ ಗಲಭೆಗಳು ನಡೆದಿದ್ದವು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಚನ್ನಪೇಟದಲ್ಲಿನ ಕರಸೇವಕ ಶ್ರೀಕಾಂತ ಪೂಜಾರಿ ಅವರನ್ನು ಡಿ. 29 ರಂದು ಬಂಧಿಸಲಾಗಿದ್ದು, ಶ್ರೀಕಾಂತ ಜಾಮೀನಿಗೆ ಸಿದ್ಧತೆ ನಡೆಸಿದ್ದಾರೆ.
31 ವರ್ಷಗಳ ಬಳಿಕ ಈ ಪ್ರಕರಣ ರೀ ಓಪನ್ ಮಾಡುವಂತಹ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪತ್ತೆ ಹಾಗೂ ಕ್ರೋಡೀಕರಣ ಮಾಡಲಾಗುತ್ತಿದೆ. ಸಂಪೂರ್ಣ ದಾಖಲೆಗಳ ಸಹಿತ ಜಾಮೀನಿಗಾಗಿ ಅರ್ಜಿ ಸಲ್ಲಿಸಲಿದ್ದೇವೆ. ಬುಧವಾರ ಜಾಮೀನು ಪಡೆದು ಶ್ರೀಕಾಂತ ಪೂಜಾರಿ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಬಂಧನ ಖಂಡಿಸಿ ಪ್ರತಿಭಟನೆ-ಆರ್. ಅಶೋಕ ಎಂಟ್ರಿ: ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾದವರ ಬಂಧನ ಖಂಡಿಸಿ, ಬುಧವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಆರ್.ಆಶೋಕ ಭಾಗಿಯಾಗಲಿದ್ದಾರೆ. 1992ರ ಗಲಭೆಯಲ್ಲಿಯ ಆರೋಪಿಗಳಲ್ಲಿ ಒಬ್ಬರಾದ ಶ್ರೀಕಾಂತ ಪೂಜಾರಿ ಅವರ ಬಂಧನ ಖಂಡಿಸಿ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.