ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದ ಹಿನ್ನೆಲೆ ರೈತರು ಬೆಳೆದ ಬೆಳೆಯೆಲ್ಲಾ ಹಾಳಾಗಿ ಸಾಕಷ್ಟು ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ರೈತರ ನೆರವಿಗೆ ರಾಜ್ಯ ಸರ್ಕಾರ ಬರ ಪರಿಹಾರ ಘೋಷಿಸಿದೆ. ಆದರೆ ಬರ ಪರಿಹಾರ ಪಡೆಯಲು ಈ ಕೆಲಸ ಮಾಡಲೇಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ X ಮಾಡಿರುವ ಸಿಎಂ ಸಿದ್ದರಾಮಯ್ಯ, ಬರ ಪರಿಹಾರ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ ಎಂದು ಹೇಳಿದ್ದಾರೆ.
ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಎಂದು ತಿಳಿಸಿದ್ದಾರೆ.
ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು.
– ಮುಖ್ಯಮಂತ್ರಿ @siddaramaiah #ಬರಪರಿಹಾರ…— CM of Karnataka (@CMofKarnataka) January 2, 2024