ದಾವಣಗೆರೆ: ರಾಜ್ಯದಲ್ಲಿ ಗಲಭೆ ಸೃಷ್ಟಿ ಮಾಡಲು ಕಾಂಗ್ರೆಸ್ ಕಾರಣವಾಗುತ್ತಿದೆ ಎಂದು ವಿಧಾನ ಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ದುರಹಂಕಾರದ ಸರ್ಕಾರ ಎಂದು ಕಿಡಿ ಕಾರಿದರು. ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನಾ ಆಗುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈ ಸಂದರ್ಭದಲ್ಲಿ ರಾಮಭಕ್ತರನ್ನು ಬೆದರಿಸುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನೂ ಕರ ಸೇವಕರ ಮೇಲಿನ ಕೇಸ್ ರೀ ಓಪನ್ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಅಲ್ಲದೇ, ಅಯೋಧ್ಯೆಯ ರಾಮನ ದೇವಸ್ಥಾನದ ಸ್ಥಳದಲ್ಲಿ ಕಾಂಗ್ರೆಸ್ ನವರು ಬಾಬರ್ ನ ಮಸೀದಿ ಇರಬೇಕಿತ್ತು ಎಂದು ಸರ್ಕಾರದ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಗಲಭೆ ಸೃಷ್ಟಿ ಮಾಡಲು ಕಾಂಗ್ರೆಸ್ ಕಾರಣವಾಗುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಈ ರೀತಿ ಮಾಡುತ್ತಿದೆ.
ಎಲ್ಲಾ ಸರ್ವೇಯಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗ್ತಾರೆ ಎಂದು ಗೊತ್ತಾಗಿದೆ. ಕೇಸ್ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಂದಾಗ ಕಾಂಗ್ರೆಸ್ ರಾಮನ ಬಗ್ಗೆ ಮಾತನಾಡಿದ್ದು, ರಾಮಾಯಣವೇ ಇಲ್ಲ, ರಾಮ ಕೇವಲ ಕಲ್ಪನೆ ಅಷ್ಟೇ ಎಂದು ಕಾಂಗ್ರೆಸ್ ನವರು ಹೇಳಿದ್ದರು. ಅಲ್ಲಿ ರಾಮ ಮಂದಿರ ಇರುವುದು ಅವರಿಗೆ ಇಷ್ಟ ಇಲ್ಲ. ಅಲ್ಲಿ ಬಾಬರ್ ನ ಮಸೀದಿ ಇರಬೇಕಿತ್ತು ಎಂದು ಬಯಸುತ್ತಾರೆ ಎಂದು ಹೇಳಿದರು.