ಗದಗ: ಹುಬ್ಬಳ್ಳಿಯಲ್ಲಿ ರಾಮ ಜನ್ಮ ಭೂಮಿ ಹೋರಾಟಗಾರ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಗದಗ ನಗರದ ಜಿಲ್ಲಾಡಳಿತ ಭವನದ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನ ನಡೆಸಿದ್ರು. ಈ ವೇಳೆ ಪೊಲೀಸರ ಮನವಿಗೂ ಜಗ್ಗದ ಬಿಜೆಪಿ ಕಾರ್ಯಕರ್ತರು ಗೇಟ್ ತಳ್ಳಿಕೊಂಡು ಜಿಲ್ಲಾಡಳಿತ ಭವನ ಪ್ರವೇಶಿಸಿದ್ರು ನಂತರ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನಿಸಿದ್ರು.
ಇದ್ರಿಂದಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಹಿಂದೂ ವಿರೋಧಿ ಸರ್ಕಾರ ಅಂತಾ ಘೋಷಣೆ ಕೂಗಿ ಹಿಂದೂ ಭಕ್ತರ ಮೇಲೆ ತುಘಲಕ್ ದರ್ಬಾರ್ ಅಂತಾ ಆಕ್ರೋಶ ವ್ಯಕ್ತಪಡಿಸಿದ್ರು. ಕೂಡಲೇ ಹಿಂದೂ ಕಾರ್ಯಕರ್ತನನ್ನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ರು. ನಂತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ರು.