ಧಾರವಾಡ: ಕೋವಿಡ್ ಸಂದರ್ಭದಲ್ಲಿ ಹಿಂದಿನ ಸರ್ಕಾರದಿಂದ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕೊಟ್ಟ ಒಂದೇ ಒಂದು ಹೇಳಿಕೆಯನ್ನು ಬಂಡವಾಳ ಮಾಡಿಕೊಂಡ ಕಾಂಗ್ರೆಸ್ ಇದೀಗ ಪ್ರತಿಭಟನೆಗಿಳಿದಿದೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ. ಇದನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು. ಕೋವಿಡ್ ಸಂದರ್ಭದಲ್ಲಿ ಅವ್ಯವಹಾರ ಆಗಿದೆ ಎಂದು ಅದೇ ಪಕ್ಷದ ಶಾಸಕರು ಆರೋಪ ಮಾಡುತ್ತಿದ್ದಾರೆ.
Cashews Benefits: ಪ್ರತಿದಿನ ಗೋಡಂಬಿ ತಿನ್ನುವುದರಿಂದ ಎಷ್ಟೊಂದು ಪ್ರಯೋಜನವಿದೆ ಗೊತ್ತಾ..?
ರಾಜ್ಯ ಸರ್ಕಾರ ಈ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಹೆಣದ ಮೇಲೆ ಹಣ ಮಾಡುವ ಕೆಲಸ ಮಾಡಿದೆ. ಇದನ್ನು ಸ್ವ ಪಕ್ಷದವರೇ ಬೆಳಕಿಗೆ ತರುತ್ತಿದ್ದು, ಕೂಡಲೇ ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.