ದಾವಣಗೆರೆ: ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ರಾಮ ಭಕ್ತರನ್ನು ಹೆದರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇಡೀ ದೇಶ ರಾಮ ಭಕ್ತರು ಸಂತೋಷದಿಂದ ಇದ್ದಾರೆ.
ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಮಭಕ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಠಿಗೆ ಕಾಂಗ್ರೆಸ್ ಕಾರಣವಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ (Congress) ಲೋಕಸಭೆಯಲ್ಲಿ ಸೋಲಿನ ಭೀತಿ ಎದುರಿಸುತ್ತಿದೆ. ಎಲ್ಲಾ ಸರ್ವೆಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎಂದು ತಿಳಿದು ಬಂದಿದೆ.
Cashews Benefits: ಪ್ರತಿದಿನ ಗೋಡಂಬಿ ತಿನ್ನುವುದರಿಂದ ಎಷ್ಟೊಂದು ಪ್ರಯೋಜನವಿದೆ ಗೊತ್ತಾ..?
ಅದೇ ಕಾರಣಕ್ಕೆ ಕಾಂಗ್ರೆಸ್ ಈ ರೀತಿ ನಡೆದುಕೊಳ್ಳುತ್ತಿದೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ರಾಮ ಮಂದಿರ ವಿಚಾರಣೆಗೆ ಬಂದಾಗ ರಾಮಾಯಣವೇ ಇಲ್ಲ. ರಾಮ ಕೇವಲ ಕಲ್ಪನೆ ಎಂದು ಕಾಂಗ್ರೆಸ್ ಹೇಳಿತ್ತು. ಅಯೋಧ್ಯೆಯಲ್ಲಿ ರಾಮ ಮಂದಿರ ಇರುವುದು ಅವರಿಗೆ ಇಷ್ಟ ಇಲ್ಲ. ಅಲ್ಲಿ ಬಾಬ್ರಿ ಮಸೀದಿ ಇರಬೇಕಿತ್ತು. ಅದ್ದರಿಂದ ಹುಬ್ಬಳಿಯಲ್ಲಿ 31 ವರ್ಷದ ನಂತರ ಕರಸೇವಕರ ಮೇಲೆ ಕೇಸ್ ಹಾಕಿ ಬಂಧಿಸಿದ್ದಾರೆ. ಕರ ಸೇವಕರ ಮೇಲೆ ಹಾಕಿದ ಕೇಸ್ಗಳಿಗೆ ಸಾಕ್ಷಿ ಇಲ್ಲ ಎಂದು ಕೋರ್ಟ್ ಹೇಳಿದೆ ಎಂದಿದ್ದಾರೆ.