ದಾವಣಗೆರೆ:- ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿವಾಧಾತ್ಮಕ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಹಿಂದು ರಾಷ್ಟ್ರ ಆಗಬಾರದು. ಹಿಂದು ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಜಾತ್ಯಾತೀತತೆಯಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಇದು ನಾನು ಹೇಳಿದ್ದಲ್ಲ, ಇದನ್ನು ಅಂಬೇಡ್ಕರ್ ಅವರೇ ಹೇಳಿದ್ದಾರೆ ಎಂದರು
ನಮ್ಮ ದೇಶ ಹಿಂದು ರಾಷ್ಟ್ರವಾದರೆ ದೇಶಕ್ಕೆ ತೊಂದರೆ. ನಮ್ಮ ದೇಶವು, ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದ ರೀತಿ ಆಗುತ್ತೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ನಮ್ಮ ದೇಶ ಜಾತ್ಯಾತೀತವಾದ ದೇಶವಾಗಿದ್ದು, ಅದನ್ನು ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಆಗುವುದಿಲ್ಲ’’ ಎಂದು ಹೇಳಿದ್ದಾರೆ.
ಇವತ್ತು ಜಾತ್ಯಾತೀತ ತತ್ವಕ್ಕೆ ಅಪಾಯ ಬಂದಿದೆ. ಬಿಜೆಪಿ ಹಾಗೂ ಮಾತೃ ಸಂಸ್ಥೆ ಆರ್ ಎಸ್ ಎಸ್ ಅಪಾಯ ಶುರುವಾಗಿದೆ. ಬಿಜೆಪಿಯ ಅಂಗ ಸಂಘಟನೆಗಳು ಹಿಂದು ದೇಶ ಮಾಡೋಕೆ ಹೊರಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಟ್ಟರೆ ನಮ್ಮ ದೇಶ ಕೂಡ ಪಾಕಿಸ್ತಾನ ಅಪ್ಘಾನಿಸ್ತಾನ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಧರ್ಮದ ಮೇಲೆ ರಾಜಕೀಯ ಮಾಡುವ ಪಕ್ಷಗಳ ಬಗ್ಗೆ ನಾವು ಹುಷಾರಾಗಿರಬೇಕು. ಧರ್ಮದಿಂದ ಹಿಂದುಳಿದವರು ಮೇಲೇಳೋಕೆ ಸಾಧ್ಯವಾಗುತ್ತಿಲ್ಲ. ಇತಿಹಾಸವನ್ನ ನೋಡಿ ನಾವು ಪಾಠ ಕಲಿಯಬೇಕು. ಇತಿಹಾಸ ನೋಡಿ ನಾವು ದೇಶವನ್ನ ಕಟ್ಟಬೇಕು ಎಂದು ಹೇಳಿದ್ದಾರೆ.