ಹಾಸನ : ಮೂವತ್ತೊಂದು ವರ್ಷದ ಹಿಂದಿನ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧಿಸಿ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎಂದು ಮತ್ತೆ ಮತ್ತೆ ಸಾಭಿತು ಪಡಿಸುತ್ತಿದೆ ಎಂದು ಬಿಜೆಪಿ ಮುಖಂಡ ನವೀಲೆ ಅಣ್ಣಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಇದ್ದು ಹುಬ್ಬಳ್ಳಿಯ ಹಿಂದೂ ಕಾರ್ಯಕರ್ತ ಶ್ರೀಕಾಂತ್ ರವರ 31 ವರ್ಷಗಳ ಹಿಂದಿನ ಪ್ರಕರಣವನ್ನು ಪುನಃ ತೆರೆದು ಬಂಧಿಸಿವುದರ ಮೂಲಕ ಸಿಎಂ ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಪದೇ ಪದೇ ಕರ್ನಾಟಕದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ರಾಮ ಜನ್ಮಭೂಮಿ ಹೋರಾಟದ ಪ್ರಕರಣ 31 ವರ್ಷಗಳ ನಂತರ ಮರು ಪ್ರಕರಣ ಮಾಡುವ ಅವಶ್ಯಕತೆಯಿರಲಿಲ್ಲ. ಕಾಂಗ್ರೆಸ್ ಸರ್ಕಾರ ಒಂದು ಕಡೆ ಅಲ್ಪಸಂಖ್ಯಾತರ ಒಲೈಕೆ ಮಾಡುಕೊಳ್ಳುತ್ತಿದ್ದರೆ ಮತ್ತೊಂದು ಕಡೆ ಹಿಂದೂಗಳನ್ನು ಗುರಿಯಾಗಿಸಿ ಇಂತಹ ಪ್ರಕರಣಗಳನ್ನು ಸಿಲಿಕಿಸುವ ಕೆಲಸ ಮಾಡುವ ಗಂಭೀರ ಆರೋಪ ಮಾಡಿದರು.
1992 ರಲ್ಲಿ ಬಾಬರಿ ಮಸೀದಿ ದ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚರ ಪ್ರಕರಣಕ್ಕೆ ಸಂಭಂದಿಸಿದಂತೆ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದ್ದು. ರಾಮಭಕ್ತನನ್ನು ಬಂಧಿಸಲು ಕಾಂಗ್ರೆಸ್ ಸರ್ಕಾರ ಧೈರ್ಯಮಾಡುವ ಮೂಲಕ ರಾಜ್ಯದಲ್ಲಿ ಶಾಂತಿ ಸೌಹಾರ್ದತೆಯನ್ನು ಕದಡಲು ಪ್ರಯತ್ನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಹಾಸನದಲ್ಲೂ ಸಹ ಅನೇಕ ರಾಮಭಕ್ತರು ಸೇವೆಯಲ್ಲಿ ಪಾಲ್ಗೊಂಡಿದ್ದರು ಅವರ ಮೇಲೆ ದೌರ್ಜನ್ಯ ಧರ್ಮ ದಂಗಲ್ ಮುಂದುವರೆದರೆ ಮುಂದಿನದಿವಸಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಕಿರಣ್ ಗೌಡ,ನಗರಸಭೆ ಮಾಜಿ ಅಧ್ಯಕ್ಷ ಆರ್ .ಮೋಹನ್, ರಾಜಗೋಪಾಲ್,ನಗರಾಧ್ಯಕ್ಷ , ವೇಣುಗೋಪಾಲ್, ನಾಗೇಶ್, ವೇದಾವತಿ ಬಿ. ಶೋಬನ್ ಬಾಬು , ಬೀಡಾ ರಾಮು, ಲೋಹಿತ್ ಜಂಬರಡಿ, ಅನ್ನಪೂರ್ಣಮ್ಮ , ಪ್ರೀತಿವರ್ಧನ್, ಯುವ ಮುಖಂಡ ಕಾರ್ತಿಕ್ ಉದಯ ಗಿರಿ ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು.