ಬೆಂಗಳೂರು : ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಸಭೆ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
K – SET Exam: ಜನವರಿ 13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಪಡೆದುಕೊಳ್ಳಲು ಡೌನ್ಲೋಡ್ಗೆ ಸೂಚನೆ
ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧಸಿ, ಹಿಂದಿನ ಪ್ರಕರಣಕ್ಕೆ ಈಗ ಜೀವನೀಡಿರುವ ಬಗ್ಗೆ ಬಿಜೆಪಿಯವರು ಇಂದು ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಶ್ನೆಯನ್ನು ಮಾಧ್ಯಮದವರು ಬಿಜೆಪಿಯವರಿಗೆ ಕೇಳಬೇಕು. ಅಪರಾಧ ಮಾಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ. ಟೀಕೆಗಳಿಗೆ , ಅನುಮಾನಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದರು.