ಶುಭಮನ್ ಗಿಲ್ ಟೆಸ್ಟ್ ಸ್ವರೂಪದಲ್ಲಿ 3ನೇ ಕ್ರಮಾಂಕದಲ್ಲಿ ಆಡುವ ಬಗ್ಗೆ ರೋಹಿತ್ ಶರ್ಮಾ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಏಕದಿನ ಹಾಗೂ ಟ್ವೆಂಟಿ-20 ಸ್ವರೂಪದಲ್ಲಿ ಈಗಲೂ ಆರಂಭಿಕ ಆಟಗಾರನಾಗಿರುವ ಗಿಲ್, ಐಪಿಎಲ್ ತಾರೆ ಯಶಸ್ವಿ ಜೈಸ್ವಾಲ್ ಆಗಮನದ ನಂತರ ಟೆಸ್ಟ್ ಮಾದರಿಯಲ್ಲಿ 3ನೇ ಕ್ರಮಾಂಕದಲ್ಲಿ ಆಡುತ್ತಿದ್ದಾರೆ,
ಶುಭಮನ್ ಗಿಲ್ ತಮಗೆ ಒಪ್ಪದ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಕ್ರಮಾಂಕದಲ್ಲಿ 9 ಇನಿಂಗ್ಸ್ ನಲ್ಲಿ ಆಡಿರುವ ಶುಭಮನ್ ಗಿಲ್, ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು ಒಂದೇ ಒಂದು ಅರ್ಧಶತಕ ಗಳಿಸಲು ವಿಫಲರಾಗಿದ್ದಾರೆ. ಅಲ್ಲದೆ ಕಳೆದ 5 ಇನಿಂಗ್ಸ್ ನಲ್ಲಿ18.25 ಸರಾಸರಿಯಲ್ಲಿ 73 ರನ್ ಬಾರಿಸಿದ್ದು ಮಾಜಿ ಕ್ರಿಕೆಟಿಗರ ಟೀಕೆಗೆ ಗುರಿಯಾಗಿದ್ದಾರೆ.
ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಕೇಪ್ ಟೌನ್ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯಕ್ಕೂ ಮುನ್ನ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಶುಭಮನ್ ಗಿಲ್ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಮಾತನಾಡಿದ್ದಾರೆ. ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಗಿಲ್ 2 ಹಾಗೂ 26 ರನ್ ಗಳಿಸಿದ್ದರು.
ಕೆಲವು ಪಂದ್ಯಗಳಲ್ಲಿ 3ನೇ ಕ್ರಮಾಂಕದಲ್ಲಿ ಆಡಲು ಕೇವಲ ಒಂದು ಎಸೆತದ ಅಂತರವಿರುತ್ತದೆ. ಒಂದು ವೇಳೆ ಆರಂಭಿಕ ಆಟಗಾರ ಗಾಯಗೊಂಡರೆ ಆಗ 3ನೇ ಕ್ರಮಾಂಕದ ಆಟಗಾರ ಇನಿಂಗ್ಸ್ ಆರಂಭಿಸಲು ಸಜ್ಜಾಗಿರಬೇಕಾಗಿರುತ್ತದೆ. ಆದ್ದರಿಂದ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದರಲ್ಲಿ ನನಗೆ ಹೆಚ್ಚಿನ ವ್ಯತ್ಯಾಸ ಕಂಡುಬರುವುದಿಲ್ಲ” ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.