ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸ್ ಠಾಣೆಯಿಂದ ಮಾದಕ ದ್ರವ್ಯಗಳ ವಿರುದ್ದ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮ ಗಳ ಬಗ್ಗೆ ಜಾಗೃತಿ ಜಾಥಾ ನಡೆಸಿದ ಪೋಲಿಸ್ ಸಿಬ್ಬಂದಿ ಅಥಣಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ,
ಮಾದಕ ವಸ್ತುಗಳ ಬಳಕೆ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರಲ್ಲದೆ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಕಾನೂನು ಪ್ರಕಾರ ಅಪರಾಧವಾಗಿದ್ದು ಅಂತಹ ಚಟುವಟಿಕೆಗಳ ನಿಯಂತ್ರಣಕ್ಕೆ ಸಾರ್ವಜನಿಕರು ಕೈ ಜೋಡಿಸುವ ಮೂಲಕ ಸಮಾಜದ ಶಾಂತಿ ಸುವ್ಯವಸ್ಥೆ ಕಾಯಲು ಸಹಕರಿಸಬೇಕು.
Cashews Benefits: ಪ್ರತಿದಿನ ಗೋಡಂಬಿ ತಿನ್ನುವುದರಿಂದ ಎಷ್ಟೊಂದು ಪ್ರಯೋಜನವಿದೆ ಗೊತ್ತಾ..?
ಮೊದಲು ಸಿಗರೇಟು,ತಂಬಾಕು,ಗುಟಕಾಗಳಿಂದ ಆರಂಭವಾಗುವ ದುಶ್ಚಟಗಳು ಕ್ರಮೇಣ ಗಾಂಜಾ,ಕಾಫ್ ಸಿರಪ್,ವೈಟ್ನರ್,ಪೆಟ್ರೋಲ್ ಸೇರಿದಂತೆ ಹಲವು ಮಾದಕ ವಸ್ತುಗಳ ದುಶ್ಚಟವಾಗಿ ಪರಿಣಮಿಸುತ್ತವೆ. ಇದರಿಂದ ಮಾದಕ ವಸ್ತುಗಳ ಸೇವನೆ ಮಾಡುವ ವ್ಯಕ್ತಿಯ ಆರೋಗ್ಯದ ಮೇಲೆ ಪರಿಣಾಮ ಬೀರುವದರ ಜೊತೆಗೆ ಆತನ ಕುಟುಂಬಕ್ಕೆ ಅದರ ದುಷ್ಪರಿಣಾಮ ಬೀರುತ್ತದೆ ಆದ್ದರಿಂದ ವಿಶೇಷವಾಗಿ ಇಂದಿನ ಯುವಕರು ಮಾದಕ ವಸ್ತುಗಳಿಂದ ದೂರ ಉಳಿಯಬೇಕೆಂದು ಡಿ ವೈ ಎಸ್ ಪಿ ಶ್ರೀಪಾದ ಜಲ್ದೆ ಹೇಳಿದರು.