ನವದೆಹಲಿ: ಅದಾನಿ (Adani) ಹಿಂಡೆನ್ಬರ್ಗ್ ಶಾರ್ಟ್ ಸೆಲ್ಲಿಂಗ್ ಪ್ರಕರಣದಲ್ಲಿ ಸೆಬಿ ಬದಲು ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೆಂಬ ವಾದವನ್ನು ಸುಪ್ರೀಂ ಕೋರ್ಟ್ (Supreme Court) ತಿರಸ್ಕರಿಸಿದೆ. ಈ ಪ್ರಕರಣದ ತನಿಖೆ ನಡೆಸಲು ಸೆಬಿ ಸಮರ್ಥವಾಗಿದೆ. ಮೂರು ತಿಂಗಳ ಒಳಗಡೆ ಸೆಬಿ ಸಂಪೂರ್ಣವಾಗಿ ತನಿಖೆ ನಡೆಸಬೇಕೆಂದು ಕೋರ್ಟ್ ಸೂಚಿಸಿದೆ. ಸಿಜೆಐ ಡಿವೈ ಚಂದ್ರಚೂಡ್, ನ್ಯಾ.ಜೆಬಿ ಪರ್ದಿವಾಲಾ ಮತ್ತು ನ್ಯಾ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ನವೆಂಬರ್ನಲ್ಲಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.
ದಾನಿ ಕಂಪನಿಗಳು ತನ್ನ ಷೇರಿನ ಬೆಲೆಗಳನ್ನು ಕೃತಕವಾಗಿ ಹೆಚ್ಚಿಸಿದೆ ಎಂದು ಹಿಂಡೆನ್ಬರ್ಗ್ ಸಂಶೋಧನಾ ವರದಿ (Hindenburg Research Report) ಬಳಿಕ ವಿವಿಧ ಅದಾನಿ ಕಂಪನಿಗಳ ಷೇರು ಮೌಲ್ಯದಲ್ಲಿ ತೀವ್ರ ಕುಸಿತವಾಗಿ ಸುಮಾರು 100 ಶತಕೋಟಿ ಡಾಲರ್ ಸಂಪತ್ತು ಕರಗಿತ್ತು. ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ (SIT) ರಚಿಸಬೇಕು ಎಂದು ಕೋರಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.
ಕೋರ್ಟ್ ಹೇಳಿದ್ದೇನು?
ಅದಾನಿ ವಿರುದ್ಧದ 22 ಆರೋಪಗಳ ಪೈಕಿ 20ರ ತನಿಖೆಯನ್ನು ಪೂರ್ಣಗೊಳಿಸಿದೆ. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡು ಇತರ ಎರಡು ಪ್ರಕರಣಗಳ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಲು ನಾವು ಸೆಬಿಗೆ ನಿರ್ದೇಶಿಸುತ್ತೇವೆ.
ತನಿಖೆಯನ್ನು ಸೆಬಿಯಿಂದ ಎಸ್ಐಟಿಗೆ ವರ್ಗಾಯಿಸಲು ಯಾವುದೇ ಆಧಾರವಿಲ್ಲ. ಸೆಬಿ ತನಿಖೆಯನ್ನು ಅನುಮಾನಿಸಲು ಒಸಿಸಿಆರ್ಪಿ (OCCRP: Organized Crime and Corruption Reporting Project) ವರದಿಯನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಒಸಿಸಿಆರ್ಪಿ ವರದಿಯನ್ನು ತಿರಸ್ಕರಿಸಲಾಗಿದೆ. ಯಾವುದೇ ಪರಿಶೀಲನೆಯಿಲ್ಲದೆ ಮೂರನೇ ಸಂಸ್ಥೆಯ ವರದಿಯನ್ನು ಪುರಾವೆಯಾಗಿ ಪರಿಗಣಿಸುವುದಿಲ್ಲ.
‘ನೂರು ರೂಪಾಯಿ ಮಿಕ್ಸ್’ ಭೀಮಾ ಚಿತ್ರದ ಭರ್ಜರಿ ಸಾಂಗ್ ರಿಲೀಸ್ : ಇದರ ವಿಶೇಷತೆ ಏನ್ ಗೊತ್ತಾ?
ಈ ಪ್ರಕರಣದ ತನಿಖೆಯನ್ನು ಸೆಬಿಯಿಂದ ಬೇರೆ ಕಡೆ ವರ್ಗಾಯಿಸಬೇಕೆಂಬ ವಾದಕ್ಕೆ ಯಾವುದೇ ಆಧಾರವಿಲ್ಲ. ತಜ್ಞರ ಸಮಿತಿಯ ಸದಸ್ಯರ ಹಿತಾಸಕ್ತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಾದಗಳನ್ನು ತಿರಸ್ಕರಿಸುತ್ತದೆ.
ಭಾರತ ಸರ್ಕಾರ ಮತ್ತು ಸೆಬಿಯು ಹಿಂಡೆನ್ಬರ್ಗ್ ವರದಿಯಿಂದ ಶಾರ್ಟ್ ಸೆಲ್ಲಿಂಗ್ಗೆ ಸಂಬಂಧಿಸಿದಂತೆ ಯಾವುದೇ ಕಾನೂನು ಉಲ್ಲಂಘನೆಯಾಗಿದೆಯೇ ಎಂದು ಪರಿಶೀಲಿಸಬೇಕು. ಉಲ್ಲಂಘನೆಯಾಗಿದ್ದಲ್ಲಿ ಕಾನೂನು ಪ್ರಕಾರ ಕೈಗೊಳ್ಳಬೇಕು.