ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ (BJP) ನಿತ್ಯ ಪ್ರತಿಭಟನೆ (Protest) ನಡೆಸಲು ಮುಂದಾಗಿದ್ದು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್ ಕುಮಾರ್ (Sunil Kumar) ಅವರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ
ಬೆಂಗಳೂರು-ತುಮಕೂರು ರಸ್ತೆಯಲ್ಲಿ ಕಾರು ಚಾಲಕರ ಡಿಶುಂ-ಡಿಶುಂ: Video Viral!
ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು.
1992ರ ಡಿಸೆಂಬರ್ 6ರ ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.