ಬೆಂಗಳೂರು: ಶ್ರೀನಗರದ ಲಾಲ್ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್ ಜೋಷಿಯವರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ಪೊಲೀಸರ ರಾಜ್ಯ ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಎಚ್ಚರಿಸಿದರು
ರಾಮ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ (Freedom Park) ಇಂದು ನಡೆದ ಬಿಜೆಪಿ (BJP) ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳಿಗೆ 48 ಗಂಟೆಗಳ ಗಡುವು ಕೊಡುತ್ತೇವೆ. ಶ್ರೀಕಾಂತ್ ಪೂಜಾರಿಯವರ ಬಿಡುಗಡೆ ಮಾಡದಿದ್ದರೆ, ಬಿಜೆಪಿ ಯುವಮೋರ್ಚಾ ವತಿಯಿಂದ ಹುಬ್ಬಳ್ಳಿ ಪೊಲೀಸ್ ಠಾಣೆಗೆ (Hubballi Police Station) ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇಂದು ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ ಎಂದು ತಿಳಿಸಿದರು. ಅವಶ್ಯಕತೆ ಬಂದರೆ ರಸ್ತೆಗಿಳಿದು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಬೆಂಗಳೂರು ನಗರ ಕ್ರೈಂ ಸಿಟಿಯಾಗುತ್ತಿದೆಯೇ: ಅಕ್ರಮ ಸಂಬಂಧಕ್ಕೆ ಕೊಲೆಗಳು ಹೆಚ್ಚು!
ರಾಜ್ಯದಲ್ಲಿ ಮೊಘಲರ ಆಡಳಿತ, ತಾಲಿಬಾನ್ (Taliban) ಆಡಳಿತ ಇದೆಯೇ ಎಂದು ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ. ಹಿಂದೂ ಹಕ್ಕುಗಳನ್ನು ತುಳಿಯುವ ಕೆಲಸ, ಹಿಂದೂ ವಿರೋಧಿ ನೀತಿ ನಿಮ್ಮದು. ನಿಮಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದರು.