ಚಾಮರಾಜನಗರ: ಹುಬ್ಬಳ್ಳಿಯಲ್ಲಿ ಬಂಧನಕ್ಕೊಳಗಾದ ಶ್ರೀಕಾಂತ್ ಪೂಜಾರಿಯವರ ಬಿಡುಗಡೆಗೆ ಆಗ್ರಹಿಸಿ ಮತ್ತು ರಾಜ್ಯಾದ್ಯಂತ ರಾಮಭಕ್ತರ ಮೇಲೆ ಪೊಲೀಸ್ ಇಲಾಖೆಯಿಂದ ಆಗುತ್ತಿರುವ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸಬೇಕೆಂದು ಬಿಜೆಪಿಗರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದ್ರು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಮಾವೇಶಗೊಂ,
ಡ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರವು ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಸ ವ್ಯಕ್ತಪಡಿಸಿದರು. ಅಯೋದ್ಯ ಗಲಾಟೆ ನಡೆದು 31 ವರ್ಷದ ಬಳಿಕ ರಾಮನ ಭಕ್ತರ ಮೇಲೆ ಕೇಸು ದಾಖಲಿಸಿ ಬಂಧಿಸಲಾಗುತ್ತಿದೆ.ಕೂಡಲೆ ಶ್ರೀಕಾಂತ್ ಪೂಜಾರಿಯನ್ನು ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.