ಬೆಂಗಳೂರು: ಗೋಧ್ರಾ ಮಾದರಿ ಮತ್ತೊಂದು ದುರಂತ ಸಂಭವಿಸಬಹುದು ಎಂಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿಕೆಯನ್ನ ಸಂಸದ ಡಿ.ಕೆ.ಸುರೇಶ್ (D.K.Suresh) ಸಮರ್ಥಿಸಿಕೊಂಡಿದ್ದಾರೆ.
Breaking News: ಬಿಜೆಪಿಗೆ ಮುಖ್ಯ ವಕ್ತಾರರು ಹಾಗೂ ಸಹ ಸಂಚಾಲಕರ ನಿಯೋಜನೆ
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಆಗಿದೆ. ರಾಮಮಂದಿರಕ್ಕೂ ರಕ್ಷಣೆ ಬೇಕು, ಭಕ್ತರಿಗೂ ರಕ್ಷಣೆ ಕೊಡಬೇಕು. ಏನೇ ಇದ್ರೂ ರಕ್ಷಣೆ ಕೊಡುವುದು ಸರ್ಕಾರದ ಕರ್ತವ್ಯ. ಆ ದೃಷ್ಟಿಯಿಂದ ಹರಿಪ್ರಸಾದ್ ಅವರು ಹೇಳಿದ್ದಾರೆ ಎಂದು ತಿಳಿಸಿದರು.
ಕರಸೇವಕರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ವಿಚಾರ ಕುರಿತು ಮಾತನಾಡಿ, ಯಾರನ್ನೂ ಉದ್ದೇಶಪೂರ್ವಕವಾಗಿ ಬಂಧನ ಮಾಡಿಲ್ಲ. ಸರ್ಕಾರ ಕೆಲ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಕೆಲ ದುರ್ಘಟನೆ ನಡೆಯಬಹುದು ಎಂಬ ಗುಮಾನಿ ಮೇಲೆ ಬಂಧನ ಮಾಡಲಾಗಿದೆ. ಇದು ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಮಾಡಿರುವ ಕ್ರಮ. ಇದರಲ್ಲಿ ರಾಜಕೀಯ ಇಲ್ಲ ಎಂದರು.