ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ (BJP) ನಿತ್ಯ ಪ್ರತಿಭಟನೆ (Protest) ನಡೆಸಲು ಮುಂದಾಗಿದ್ದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಮತ್ತೊಬ್ಬ ಶಾಸಕ ಸಿ.ಟಿ.ರವಿ
ಇಂದು ಬೆಳಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಕೂಡ ಇದೇ ರೀತಿ ಪ್ರತಿಭಟನೆ ಮಾಡಿದ್ದರು. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್ ಕುಮಾರ್ (Sunil Kumar) ಅವರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದರು.
ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು. ಹಾಗೆ ಅದೇ ರೀತಿ ಈಗ ಸಿ.ಟಿ.ರವಿ ಅವರು ಕೂಡ ಅಭಿಯಾನ ಆರಂಭಿಸಿದ್ದಾರೆ.