ರಾಮನಗರ: ಗೋಧ್ರಾ ಮಾದರಿ ದುರಂತದ ವಿಚಾರವಾಗಿ ಈ ಹಿಂದೆ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡಿದ್ದ ಬಿಕೆ ಹರಿಪ್ರಸಾದ್ ಅವರಿಗೆ ಮಾಹಿತಿ ಇರಬಹುದು. ಹಾಗಾಗಿ ಅವರನ್ನೇ ಕೇಳಿ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾರ್ಮಿಕವಾಗಿ ಹೇಳಿದ್ದಾರೆ. ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು.
ಹಿಂದೆ ನಡೆದ ಗೋಧ್ರಾ ದುರಂತದ ರೀತಿ ಮತ್ತೆ ಅಪಾಯ ಸಂಭವಿಸುವ ಮಾಹಿತಿ ಇದೆ. ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸ್ಪೋಟಕ ಹೇಳಿಕೆ ನೀಡಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಇದಕ್ಕೆ ಸಂಬಂಧಿಸಿ ಚನ್ನಪಟ್ಟಣದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿೆಗೆ ಪ್ರತಿಕ್ರಿಯಿಸಿದ ಅವರು ಹರಿಪ್ರಸಾದ್ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದವರು.
Stomach Pain: ತಿಂದ ಕೂಡಲೇ ಹೊಟ್ಟೆ ನೋವಾಗುತ್ತ.? ಹಾಗಾದ್ರೆ ಈ ಮನೆ ಮದ್ದು ಟ್ರೈ ಮಾಡಿ
ಈ ಹಿಂದೆ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ರು. ಹಾಗಾಗಿ ಅವರಿಗೆ ಮಾಹಿತಿ ಇರಬಹುದು. ನೀವು ಅದರ ಬಗ್ಗೆ ಅವರನ್ನೇ ಕೇಳಿ ಎಂದರು. ಇನ್ನು ಸಿದ್ದರಾಮಯ್ಯ 5 ವರ್ಷ ಸಿಎಂ ಆಗಲು ಹೋರಾಟ ಮಾಡಬೇಕು ಎಂಬ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಅದು ಯಾಕೆ ಚರ್ಚೆಗೆ ಬಂತು ಅಂತ ಅವರನ್ನೇ ಕೇಳಿ. ಅವರು ರೀತಿ ಹೇಳುವ ಅವಶ್ಯಕತೆ ಇಲ್ಲ ಎಂದರು.