ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಜರುಗಿದೆ.
30 ವರ್ಷದ ನೀಲಂ ಮೃತ ರ್ದುದೈವಿ. ಪತಿ ಕೆಲಸಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಮನೆಯಲ್ಲಿದ್ದ ಒಡವೆ, ಹಣ ಏನೂ ಕಳ್ಳತನವಾಗಿಲ್ಲ. ಹೀಗಾಗಿ ಯಾರೋ ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎಲೆಕ್ಟ್ರಾನಿಕ್ಸಿಟಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಪತಿ ಹಾರ್ಡ್ವೇರ್ ಶಾಪ್ ಜೊತೆ ಕಾಂಟ್ರಾಕ್ಟ್ ಕೆಲಸ ಮಾಡುತ್ತಿದ್ದ. ಮಧ್ಯಾಹ್ನ ಮಕ್ಕಳು ಶಾಲೆ ಮುಗಿಸಿ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಹೌದು, ಮಕ್ಕಳು ಮನೆಯಲ್ಲಿ ನೋಡಿದಾಗ ಹಾಲ್ನಲ್ಲಿ ತಾಯಿ ಕೊಲೆಯಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಕೂಡಲೇ ತಂದೆಗೆ ಹೇಳಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಇನ್ನು ಮನೆಯಲ್ಲಿದ್ದ ಒಡವೆ, ಹಣ ಯಾವುದು ಕಳ್ಳತನವಾಗಿಲ್ಲದೆ ಇರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.