ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಸೋಂಪುರ ಹೋಬಳಿ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಸಣ್ಣನ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಸುಮಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಅನಿತಾ ರವರು ಮಕ್ಕಳ ಜೊತೆ ಬೇಜವಾಬ್ದಾರಿತನದಿಂದ ವರ್ತಿಸುತ್ತಾರೆ ಮತ್ತು ಮಕ್ಕಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಮಕ್ಕಳ ತಾಯಂದಿರು ಆರೋಪಿಸಿ ಕೂಡಲೇ ಅನಿತಾ ರವರನ್ನು ಅಮಾನತು ಮಾಡಿ ಬೇರೆ ಕಾರ್ಯಕರ್ತೆಯನ್ನು ನೇಮಿಸಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು
ಅಂಗನವಾಡಿ ಕಾರ್ಯಕರ್ತೆಯನ್ನು ಕೂಡಲೇ ಅಮಾನತು ಮಾಡಿ ಕಾನೂನು ಕ್ರಮ ಜರಗಿಸಬೇಕೆ ಬೇರೆ ಕಾರ್ಯಕರ್ತೆಯನ್ನು ನೇಮಿಸಬೇಕು ಇಲ್ಲದಿದ್ದರೆ ನಮ್ಮ ಮಕ್ಕಳನ್ನು ಅಂಗನವಾಡಿಗೆ ಕಳಿಸುವುದಿಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಗ್ರಾಮಸ್ಥರು ತಿಳಿಸಿದರು.