ಬೆಂಗಳೂರು:- ರಾಜ್ಯದ ಐದೂ ಎಸ್ಕಾಂಗಳು ಪ್ರತಿ ಯುನಿಟ್ಗೆ 50ರಿಂದ 60 ಪೈಸೆಯಷ್ಟು ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
ಯುನಿಟ್ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದ್ದು ಕೆಇಆರ್ಸಿಯು ಪರಿಶೀಲನೆ ನಡೆಸಿ ಬೆಸ್ಕಾಂ ಹಾಗೂ ಗ್ರಾಹಕರು ಇಬ್ಬರಿಗೂ ಹೊರೆಯಾಗದ ರೀತಿಯಲ್ಲಿ ಸದ್ಯದಲ್ಲೇ ದರ ಪರಿಷ್ಕರಣೆ ಮಾಡಲಿದೆ. ಪರಿಷ್ಕೃತ ದರವು 2024ರ ಏ.1ರಿಂದ ಅನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ), ಕಲಬುರಗಿ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್-ಮೈಸೂರು) ಸಹ ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ.