ನವದೆಹಲಿ:- ಮಣಿಪುರದಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಸಲು ಉದ್ಧೇಶಿಸಲಾಗಿದ್ದ ಭಾರತ್ ನ್ಯಾಯ್ ಯಾತ್ರೆಯನ್ನು ಮರುನಾಮಕರಣ ಮಾಡಿರುವುದಾಗಿ ಎಐಸಿಸಿ ವಕ್ತಾರ ಜೈರಾಮ್ ರಮೇಶ್ ತಿಳಿಸಿದ್ದಾರೆ.
2022-23ರಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸಿದ ರಾಹುಲ್ ಈ ಬಾರಿ ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯನ್ನು ಮುನ್ನಡೆಸಲಿದ್ದಾರೆ. ಮಣಿಪುರದಿಂದ ಯಾತ್ರೆ ಆರಂಭವಾಗಿ ಗಾಂಧೀಜಿ ಜನ್ಮಸ್ಥಳ ವಾದ ಗುಜರಾತ್ನ ಪೋರಬಂದರ್ನಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆ 15 ರಾಜ್ಯಗಳು ಮತ್ತು 100 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ ಎಂದು ತಿಳಿಸಿದ್ದಾರೆ.
ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನವರಿ 14ರಂದು ಇಂಫಾಲ್ನಿಂದ ಮಧ್ಯಾಹ್ನ 12.30 ಕ್ಕೆ ಪ್ರಾರಂಭವಾಗಲಿದೆ. ಇದು ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಅರುಣಾಂಚಲ್ ಪ್ರದೇಶ, ಮೇಘಾಲಯ ಮೂಲಕ ಹಾದುಹೋಗುತ್ತದೆ. ಇದು ಮಧ್ಯ ಭಾರತವನ್ನು ತಲುಪುವ ಮೊದಲು ಬಂಗಾಳವನ್ನು ತಲುಪುತ್ತದೆ.
ಪಕ್ಷದ ಹಿರಿಯ ನಾಯಕರ ಆರೋಗ್ಯದ ಕಾಳಜಿಯಂತೆ ಸಾರ್ವತ್ರಿಕ ಚುನಾವಣೆಯ ಸಮಯದ ನಿರ್ಬಂಧದಿಂದಾಗಿ ಬದಲಾವಣೆಯಾಗಿದೆ. ನಾವು ಇಂಡಿಯಾ ಮೈತ್ರಿಕೂಟದ ಎಲ್ಲಾ ಪಕ್ಷಗಳ ನಾಯಕರು, ಅವರ ಬೆಂಬಲಿಗರು, ಸಾರ್ವಜನಿಕರು ಮತ್ತು ಎನ್ಜಿಒಗಳನ್ನು ಯಾತ್ರೆಯಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದ್ದೇವೆ ಎಂದಿದ್ದಾರೆ.