ಕಳೆದ ಬಾರಿ ಅಭಿಮಾನಿಗಳನ್ನು ಭೇಟಿಯಾಗದೆ ಕುಟುಂಬ ಸದಸ್ಯರೊಂದಿಗೆ ದುಬೈನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯಶ್ ಈ ವರ್ಷ ಪತ್ರ ಬರೆದಿದ್ದು, ” ಜನವರಿ 8.. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು ನನ್ನ ಜತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ.
ನನಗೂ ಅಷ್ಟೇ ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ರಂದು ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾ ಕಾಲ ನನ್ನ ಜತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟು ಹಬ್ಬದ ಉಡುಗೊರೆ. ನಿಮ್ಮ ಪ್ರೀತಿಯ ಯಶ್” ಎಂದು ಪೋಸ್ಟ್ ಮಾಡಿದ್ದಾರೆ.
ಯಶ್ ಸದ್ಯ ”ಟಾಕ್ಸಿಕ್” ಚಿತ್ರದ ಕೆಲಸದಲ್ಲಿ ಬಹಳಷ್ಟು ಬ್ಯುಸಿಯಾಗಿದ್ದಾರೆ. ಬಹುನಿರೀಕ್ಷಿತ ಚಿತ್ರವನ್ನು ಗೀತು ಮೋಹನ್ದಾಸ್ ನಿರ್ದೇಶಿಸುತ್ತಿದ್ದು ದೊಡ್ಡ ಬಜೆಟ್ ಯೋಜನೆಯಾಗಿದೆ. ಕರೀನಾ ಕಪೂರ್ ಖಾನ್ ಕೂಡ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಸುದ್ದಿಯಾಗಿದೆ