ರಾಮನಗರ: ಅತ್ತ ರಾಮಮಂದಿರ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ (Congress- BJP) ನಡುವೆ ಧರ್ಮ ಯುದ್ಧ ನಡೆಯುತ್ತಿದ್ದರೆ ಇತ್ತ ರಾಮನಗರದ ಕೈ ಶಾಸಕರೊಬ್ಬರು ರಾಮೋತ್ಸವದ ಜಪ ಮಾಡಿದ್ದಾರೆ. ನಾನು ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ ಎಂದು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ತಿಳಿಸಿದ್ದಾರೆ.
ರಾಮಮಂದಿರ (Ram Mandir) ಉದ್ಘಾಟನೆ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ ಎಂಬ ಕುರಿತು ಮಾತನಾಡಿದ ಅವರು, ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ವಿ. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡ್ತೀವಿ. ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ ಎಂದರು.
ಇಂಡಿಯನ್ ಆಯಿಲ್ ಕಂಪನಿಯಲ್ಲಿ 1603 ಹುದ್ದೆಗಳು ಖಾಲಿ..! ಇಂದೇ ಕೊನೆ ದಿನ – ಬೇಗ ಅಪ್ಲೈ ಮಾಡಿ
ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನ ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ. ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ. ಆದರೆ ಕಾಂಗ್ರೆಸ್ ಗೆ ತನ್ನದೇ ಆದ ಬದ್ಧತೆ, ಸಿದ್ದಾಂತ ಇದೆ ಎಂದು ಶಾಸಕರು ಹೇಳಿದರು.