ಮಾಜಿ ಬಿಗ್ ಬಾಸ್ ಸ್ಪರ್ಧಿ, ಮಾಡೆಲ್ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎನ್ನುವಂತೆ ಅವರ ಬಾಯಿಗೆ ಮಾಸ್ಕ್ ಕೂಡ ಹಾಕಲಾಗಿದೆ. ಬೆಡ್ ಮೇಲೆ ಮಲಗಿರುವ ಸ್ಥಿತಿಯಲ್ಲೇ ಎರಡು ಕೈಗಳನ್ನು ಮೇಲಕ್ಕೆತ್ತಿ ಗೆಲ್ಲುವ ಸಿಂಬಲ್ ತೋರಿಸಿದ್ದಾರೆ ಉರ್ಫಿ.
ಅಷ್ಟಕ್ಕೂ ಉರ್ಫಿಗೆ ಏನಾಯಿತು? ಗೊತ್ತಿಲ್ಲ. ಆದರೆ, ಆಸ್ಪತ್ರೆಯಲ್ಲಿ ಮಲಗಿರುವ ಫೋಟೋವನ್ನು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಫೋಟೋ ಕಂಡು ಅನೇಕರು ನೆಗೆಟಿವ್ ಕಾಮೆಂಟ್ ಮಾಡಿದ್ದಾರೆ. ಮತ್ತೆ ಬದುಕಿ ಬರಬೇಕು ಎನ್ನುವ ಅರ್ಥದಲ್ಲೂ ಕಾಮೆಂಟ್ ಮಾಡಿದ್ದಾರೆ.
ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಉರ್ಫಿ ಆ ಫೋಟೋವನ್ನು ಇನ್ಸ್ಟಾ ಖಾತೆಯನ್ನು ಡಿಲಿಟ್ ಮಾಡಿದ್ದಾರೆ. ಹಾಗಾಗಿ ಉರ್ಫಿ ಅಭಿಮಾನಿಗಳನ್ನು ದಾರಿ ತಪ್ಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಬೇರೆ ಬೇರೆ ಕಾರಣಕ್ಕಾಗಿ ಈ ರೀತಿ ಅವರು ಮಾಡಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿಕೊಂಡು ಹೋದರು ಎನ್ನುವಂತೆ ಈ ಹಿಂದೆ ಸೀನ್ ಕ್ರಿಯೇಟ್ ಮಾಡಿದ್ದರು. ಅದಕ್ಕಾಗಿ ಅವರ ಮೇಲೆ ದೂರು ಕೂಡ ದಾಖಲಾಗಿತ್ತು.
ಈಗ ಆಸ್ಪತ್ರೆಯಲ್ಲಿರುವ ಫೋಟೋ ಅದೇ ರೀತಿಯಲ್ಲಿ ಡ್ರಾಮಾ ಮಾಡಿರಬಹುದಾ? ಎನ್ನುವ ಪ್ರಶ್ನೆ ಮೂಡಿದೆ. ಅಲ್ಲದೇ ಪ್ರಚಾರಕ್ಕಾಗಿ ಉರ್ಫಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯಬಹುದು ಎನ್ನುವುದನ್ನು ಈಗಾಗಲೇ ತೋರಿಸಿದ್ದಾರೆ. ಹಾಗಾಗಿ ಆ ಫೋಟೋ ಬಗ್ಗೆ ಅನೇಕರು ತಲೆಕೆಡಿಸಿಕೊಂಡಿಲ್ಲ.