ಹಾಸನ: ಹುಟ್ಟಿದ ಒಂದೇ ದಿನಕ್ಕೆ ಗಂಡು ಮಗುವನ್ನು ಮಾರಾಟ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗುವನ್ನು ಕೊಂಡ ಮಹಿಳೆ ಉಷಾ ಹಾಗು ಮಗು ಕೊಡಲು ಪ್ರೇರಣೆ ನೀಡಿದ ಆರೋಪದಲ್ಲಿ ಶ್ರೀಕಾಂತ್ ಹಾಗು ಸುಬ್ರಹ್ಮಣ್ಯ ಎಂಬುವವರನ್ನು ಬಂಧಿಸಲಾಗಿದೆ.
ಇಂಡಿಯನ್ ಆಯಿಲ್ ಕಂಪನಿಯಲ್ಲಿ 1603 ಹುದ್ದೆಗಳು ಖಾಲಿ..! ಇಂದೇ ಕೊನೆ ದಿನ – ಬೇಗ ಅಪ್ಲೈ ಮಾಡಿ
ತಾಯಿ ಮಗುವಿನ ರಕ್ಷಣೆ ಬಗ್ಗೆ ಗಮನಹರಿಸಬೇಕಿದ್ದ ಆಶಾ ಕಾರ್ಯಕರ್ತೆ ಯಿಂದಲೇ ಅನಧಿಕೃತ ಮಗು ಮಾರಾಟಕ್ಕೆ ಬೆಂಬಲ ನೀಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ಮುಂದುವರಿದಿದ್ದು, ಮಗುವಿಗೆ ಹಾಸನ ಮಕ್ಕಳ ರಕ್ಷಣಾ ಘಟಕದಲ್ಲಿ ಆಶ್ರಯ ನೀಡಿರುವ ಅಧಿಕಾರಿಗಳು. ಸಕಲೇಶಪುರ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.