ಆನೇಕಲ್:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಟ ನಿಂತಿಲ್ಲ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಗೋಪಸಂದ್ರ ಬಳಿ ಚಿರತೆ ಪ್ರತ್ಯಕ್ಷವಾಗಿದೆ.
ಮುತ್ತನಲ್ಲೂರು-ಗೋಪಸಂದ್ರ ಮುಖ್ಯರಸ್ತೆಯಲ್ಲಿ ಚಿರತೆ ಓಡಾಡಿದ್ದು, ಅಪಾರ್ಟ್ಮೆಂಟ್ ಹಿಂಬದಿಯಲ್ಲಿ ಚಿರತೆ ಓಡಾಟ ನಡೆಸಿರುವ ದೃಶ್ಯ ಸೆರೆಯಾಗಿದೆ. ಮೊಬೈಲ್ ನಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳು ದೃಶ್ಯ ಸೆರೆ ಹಿಡಿದಿದ್ದಾರೆ.
ಚಿರತೆ ಓಡಾಟದಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಆನೇಕಲ್ ತಾಲ್ಲೂಕಿನಲ್ಲಿ ಒಂದಿಲ್ಲೊಂದು ಕಡೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಅರಣ್ಯ ಇಲಾಖೆಗೆ ಚಿರತೆ ಹಾವಳಿ ದೊಡ್ಡ ತಲೆನೋವಾಗಿದೆ.