ಚಾಮರಾಜನಗರ:- ಗುಂಡ್ಲುಪೇಟೆಯಿಂದ ಕೇರಳಕ್ಕೆ ತರಕಾರಿ ಹೊತ್ತು ಸಾಗುತ್ತಿದ್ದ
ಕೆ ಎಲ್ 85 – ಬಿ 2213 ನೋಂದಣಿಯ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡಿದಿರುವ ಘಟನೆ ಜರುಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ಕೇರಳಕ್ಕೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ಗುಂಡ್ಲುಪೇಟೆ ಕೇರಳ ರಸ್ತೆ ನಡುವೆ ಪಲ್ಟಿಯಾಗಿದ್ದು , ಪಿಕಪ್ ವಾಹನದಲ್ಲಿದ್ದ ತರಕಾರಿಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಾಹನವನ್ನ ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ.