ಹುಬ್ಬಳ್ಳಿ : ಜಾಮೀನು ಮಂಜೂರಾದ ಹಿನ್ನೆಲೆ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಅವರನ್ನು ಇಂದು ಹುಬ್ಬಳ್ಳಿ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ರಾಮಜನ್ಮಭೂಮಿ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದ ಪ್ರಕರಣ ಸಂಬಂಧ ಕರಸೇವಕ ಶ್ರೀಕಾಂತ ಪೂಜಾರಿಗೆ ನಿನ್ನೆ ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಇಬ್ಬರ ಶ್ಯೂರಿಟಿ, ಒಂದು ಲಕ್ಷ ರೂಪಾಯಿ ಮೌಲ್ಯದ 2 ಬಾಂಡ್, ಕೋರ್ಟ್ ವ್ಯಾಪ್ತಿ ಬಿಟ್ಟುಹೋಗಬಾರದು, ವಿಚಾರಣೆಗೆ ಹಾಜರಾಗಬೇಕು, ಸಾಕ್ಷ್ಯ ನಾಶ ಮಾಡಬಾರದು ಎಂದು ಷರತ್ತು ವಿಧಿಸಿ 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿನ್ನೆ ತೀರ್ಪು ಪ್ರಕಟಿಸಿತ್ತು.