ಬೆಂಗಳೂರು:- ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿ ದೇವನಹಳ್ಳಿ ಕೋರ್ಟ್ ಆದೇಶ ಹೊರಡಿಸಿದೆ.
ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರಿಗೆ ಕೊನೆಗೂ ಜಾಮೀನು ದೊರೆತಿದೆ.
ನ್ಯಾಯಾಧೀಶ ಬಿರಾದಾರ್ ದೇವೇಂದ್ರಪ್ಪ ಅವರಿದ್ದ ಪೀಠ, ನಾರಾಯಣಗೌಡ ಮತ್ತು ಇತರೆ 29 ಕಾರ್ಯಕರ್ತರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ನಾಮಫಲಕ ಧ್ವಂಸ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕರವೇ ಬೆಂಗಳೂರು ನಗರದ ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಗೌಡ, ಕಾರ್ಯಕರ್ತರಾದ ಶರತ್, ಲೋಕೇಶ್ ಗೌಡ, ಹೇಮಂತ್ ಅವರಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇವರಿಗೆ ಹಾರ ಹಾಕಿ ಪಟಾಕಿ ಸಿಡಿಸಿ ಕರವೇ ಕಾರ್ಯಕರ್ತರು ಬರಮಾಡಿಕೊಂಡರು.