ಬೆಂಗಳೂರು:- ಜಾಮೀನು ಪಡೆದ್ರೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ಮಾತ್ರ ತಪ್ಪಿಲ್ಲ. ಹೀಗಾಗಿ ಮತ್ತೆ ವಶಕ್ಕೆ ಪಡೆಯಲು ಪೊಲೀಸ್ ಚಿಂತನೆ ನಡೆಸಿದ್ದಾರೆ.
ಆಂಗ್ಲ ನಾಮಫಲಕ ವಿರುದ್ಧ ಹೋರಾಟ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ.
ಇನ್ನೂ ಬಿಡುಗಡೆ ಬೆನ್ನಲ್ಲೇ ಹಳೇ ಪ್ರಕರಣಗಳ ಸಂಬಂಧ ವಾರಂಟ್ ಮೇಲೆ ಮತ್ತೆ ಕಸ್ಟಡಿಗೆ ಪಡೆಯಲು ಕುಮಾರಸ್ವಾಮಿಲೇಔಟ್, ಹಲಸೂರು ಗೇಟ್ ಠಾಣೆ ಪೊಲೀಸರಿಂದ ಸಿದ್ಧತೆ ಮಾಡಲಾಗುತ್ತಿದೆ.
ಹಿರಿಯ ಅಧಿಕಾರಿಗಳ ಸೂಚನೆಯಂತೆ ನಾರಾಯಣಗೌಡ ವಿರುದ್ಧದ ಹಳೇ ಕೇಸ್ಗಳನ್ನು ಪೊಲೀಸರು ಕೆದಕುತ್ತಿದ್ದಾರೆ. ಬೆಂಗಳೂರಿನ ಎಲ್ಲಾ ಠಾಣೆಗಳ ಕೇಸ್ ರೀಓಪನ್ ಮಾಡಿ ನಾರಾಯಣಗೌಡನನ್ನು ವಶಕ್ಕೆ ಪಡೆಯಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ.
2017ರಲ್ಲಿ ಎನ್ಡಿಎಂಎ ಆಯಕ್ಟ್ನಡಿ ಹಲಸೂರು ಗೇಟ್ ಠಾಣೆಯಲ್ಲಿ ಒಂದು ಪ್ರಕರಣ, ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿದ್ದವು. ಈ ಕೇಸ್ ಸಂಬಂಧ ನಾರಾಯಣಗೌಡ ವಿರುದ್ಧ NBW ಜಾರಿ ಮಾಡಲಾಗಿತ್ತು. ಇವೆರಡು ಕೇಸ್ಗಳ ಸಂಬಂಧ ವಾರಂಟ್ ಮೇಲೆ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.